1 ರಿಂದ 6 ವರ್ಷದ ಒಳಗಿನ ಮಕ್ಕಳ ತಾಯಂದಿರ ಖಾತೆಗೆ ಪ್ರತಿ ತಿಂಗಳು ಬರಲಿದೆ 2500ರೂ ಕೂಡಲೇ ಅರ್ಜಿ ಸಲ್ಲಿಸಿ ಈ ಸೌಲಭ್ಯ ಪಡೆಯಿರಿ

1 ರಿಂದ 6 ವರ್ಷದ ಒಳಗಿನ ಮಕ್ಕಳ ತಾಯಂದಿರ ಖಾತೆಗೆ ಪ್ರತಿ ತಿಂಗಳು ಬರಲಿದೆ 2500ರೂ ಕೂಡಲೇ ಅರ್ಜಿ ಸಲ್ಲಿಸಿ ಈ ಸೌಲಭ್ಯ ಪಡೆಯಿರಿ


 ಮಕ್ಕಳ ಪೌಷ್ಟಿಕತೆಯ ಬಗ್ಗೆ ಅಪಾರ ಕಾಳಜಿ ಹೊಂದಿರುವ ಸರ್ಕಾರವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಅಂಗನವಾಡಿ ಕೇಂದ್ರಗಳ ಮೂಲಕ ಒಣ ಪಡಿತರ ಹಾಗೂ ಇತರ ಪೌಷ್ಟಿಕ ಆಹಾರವನ್ನು ಒದಗಿಸುತ್ತಿದೆ. 1 ರಿಂದ 6 ವರ್ಷದ ಒಳಗಿನ ಮಕ್ಕಳಿಗೆ ಮತ್ತು ಗರ್ಭಿಣಿ ಸ್ತ್ರೀಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಪಡಿತರದ ವ್ಯವಸ್ಥೆ ಜೊತೆಗೆ ಮಧ್ಯಾಹ್ನದ ವೇಳೆಯ ಪೌಷ್ಟಿಕಾಂಶಯುಕ್ತ ಊಟದ ವ್ಯವಸ್ಥೆಯನ್ನು ಕೂಡ ಮಾಡಿದೆ.


ಈಗ ಇದರಲ್ಲಿ ಮಹತ್ವದ ಬದಲಾವಣೆ ಮಾಡಲು ಸರ್ಕಾರ ತೀರ್ಮಾನಕ್ಕೆ ಬಂದಿದೆ. ಪಡಿತರದ ಬದಲು ಮಕ್ಕಳ ಖಾತೆಗೆ ಮತ್ತು ಗರ್ಭಿಣಿ ಮಹಿಳೆಯರ ಖಾತೆಗೆ 2500ರೂಗಳನ್ನು ಪ್ರತಿ ತಿಂಗಳು ಜಮೆ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ.


ಈ ಯೋಜನೆಯಲ್ಲಿ ಹೊಸ ಬದಲಾವಣೆಯನ್ನು ಮಾಡಲಾಗಿದೆ. ಅಂಗನವಾಡಿಗೆ ಹೋಗಲು ಸಾಧ್ಯವಾಗದ ಮಕ್ಕಳು ಮತ್ತು ಗರ್ಭಿಣಿ ಸ್ತ್ರೀಯರಿಗೆ ಈ ಒಣ ಪಡಿತರದ ಬದಲು ಸಹಾಯಧನವನ್ನು ಅವರ ಖಾತೆಗೆ ಹಾಕುವ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬಂದಿದೆ. ನೋಂದಣಿಯಾದ ಫಲಾನುಭವಿಗಳ ಖಾತೆಗೆ ಪ್ರತಿ ತಿಂಗಳು 2,500ರೂ. ಅದಕ್ಕಾಗಿ ಆಫ್ಲೈನ್ ಅಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.


ಆನ್ಲೈನ್ ಅಲ್ಲಿ ಅರ್ಜಿ ಸಲ್ಲಿಸುವ ಮೂಲಕ ಫಲಾನುಭವಿಗಳು ನೋಂದಣಿ ಆಗಬೇಕು. ಅದಕ್ಕಾಗಿ ಯಾವ ರೀತಿ ಅರ್ಜಿ ಸಲ್ಲಿಸಬೇಕು, ಯಾವೆಲ್ಲಾ ದಾಖಲೆಗಳನ್ನು ನೀಡಬೇಕು ಎನ್ನುವುದರ ವಿವರವನ್ನು ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ.


ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-

● ಪೋಷಕರಿಬ್ಬರ ಮತದಾರರ ಗುರುತಿನ ಚೀಟಿ

● ನಿವಾಸ ಪ್ರಮಾಣಪತ್ರ

● ಆಧಾರ್ ಕಾರ್ಡ್

● ಬ್ಯಾಂಕ್ ಖಾತೆ ವಿವರಗಳು

● ಮೊಬೈಲ್ ಸಂಖ್ಯೆ

● ಮಗುವಿನ ಜನನ ಪ್ರಮಾಣಪತ್ರ

● ಫೋಟೋ ಇತ್ಯಾದಿ


ಆನ್‌ಲೈನ್ ಅಲ್ಲಿ ಅರ್ಜಿ ಸಲ್ಲಿಸುವ ವಿಧಾನ:-

● 1 ರಿಂದ 6 ವರ್ಷದ ಒಳಗಿನ ಮಗುವಿನ ಪೋಷಕರು ಅರ್ಜಿ ಸಲ್ಲಿಸಲು ಮೊದಲು ಸಮಾಜ ಕಲ್ಯಾಣ ಇಲಾಖೆಯ ಸಮಗ್ರ ಶಿಶು ಅಭಿವೃದ್ಧಿ ಸೇವೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.

● ಹೋಮ್ ಪೇಜ್ ಅಲ್ಲಿ ಆನ್‌ಲೈನ್ ಅಪ್ಲಿಕೇಶನ್ ತೆರೆದುಕೊಳ್ಳುತ್ತದೆ.

● ಅರ್ಜಿದಾರರು ಫಾರ್ಮ್ ಅನ್ನು ಭರ್ತಿ ಮಾಡಲು ಇರುವ ಆಯ್ಕೆಯನ್ನು ಕ್ಲಿಕ್ ಮಾಡಬೇಕು ಮತ್ತು ಮುಂದಿನ ಪುಟದಲ್ಲಿ ನೀವು ಜಿಲ್ಲಾ ಯೋಜನೆ, ಪಂಚಾಯತ್, ಅಂಗನವಾಡಿ ಮತ್ತು ಕೇಂದ್ರ ಮುಂತಾದ ನೋಂದಣಿ ನಮೂನೆಯಲ್ಲಿ ನೀಡಿರುವ ಎಲ್ಲಾ ಮಾಹಿತಿಯನ್ನು ನಮೂದಿಸಬೇಕು.


● ಈ ಅರ್ಜಿದಾರರು ಪುರುಷ ಅಥವಾ ಮಹಿಳೆಯ ಆಧಾರ್ ಸಂಖ್ಯೆ ಜೊತೆಗೆ ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಮತ್ತು ಪಾಸ್‌ಪೋರ್ಟ್ ಗಾತ್ರದ ಫೋಟೋ ಇತ್ಯಾದಿಗಳನ್ನು ನಮೂದಿಸಬೇಕು. ನೀಡಿರುವ ಇತರ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಕೇಳಲಾದ ಎಲ್ಲಾ ಪ್ರಮುಖ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.


● ಗರ್ಭಿಣಿ ಮಹಿಳೆಯರು ಕೂಡ ಅವರಿಗಾಗಿ ಇರುವ ಅರ್ಜಿ ಫಾರಂ ಭರ್ತಿ ಮಾಡಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.

● ಅರ್ಜಿ ಸಲ್ಲಿಕೆ ಯಶಸ್ವಿಯಾದ ಬಳಿಕ ಪ್ರತಿ ತಿಂಗಳು 2,500 ರೂ. ಸಹಾಯಧನವು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಆಗುತ್ತದೆ, ಈ ಬಗ್ಗೆ ಹೆಚ್ಚಿನ ವಿವರಕ್ಕಾಗಿ ಹತ್ತಿರದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ಕೊಟ್ಟು ಮಾಹಿತಿ ಪಡೆದುಕೊಳ್ಳಬಹುದು.

Post a Comment

0 Comments