ಪಡಿತರ ಚೀಟಿದಾರರ ಹಿತದೃಷ್ಠಿ ಹಾಗೂ ಸಾರ್ವಜನಿಕ ವಿತರಣಾ ವ್ಯವಸ್ಥೆ ಪರಿಣಾಮಕಾರಿಗೊಳಿಸುವ ದೃಷ್ಟಿಯಿಂದ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜುಲೈ 4 ಅರ್ಜಿ ಸಲ್ಲಿಸಲು ಕೊನೆಯ ದಿನ.
ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಿರುವ ಭರಮಸಾಗರ ಗೊಲ್ಲರಹಟ್ಟಿ ಗ್ರಾಮದಲ್ಲಿ 5 ಎಎವೈ, 170 ಪಿ.ಹೆಚ್.ಹೆಚ್, 2 ಎನ್.ಪಿ.ಹೆಚ್.ಹೆಚ್ ಸೇರಿದಂತೆ ಒಟ್ಟು 177 ಪಡಿತರ ಚೀಟಿಗಳಿವೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ಧೃಡೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನದೊಳಗಾಗಿ, ಅಂದರೆ ಜುಲೈ 4 ರ ಒಳಗಾಗಿ ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಿಲ್ಲಾಧಿಕಾರಿಗಳ ಕಚೇರಿ ಸಂಕಿರ್ಣ, ಚಿತ್ರದುರ್ಗ ಇವರಿಗೆ ಅರ್ಜಿ ಸಲ್ಲಿಸಬಹುದು. ನಿಗಧಿತ ಅವಧಿಯ ನಂತರ ಸಲ್ಲಿಕೆಯಾಗುವ ಅಥವಾ ಬೇರೆ ಕಚೇರಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ
ನಿಗಧಿತ ಫಾರಂ-ಎ ಅನ್ನು ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಂಕಿರ್ಣ, ಚಿತ್ರದುರ್ಗ ಹಾಗೂ ಚಿತ್ರದುರ್ಗ ತಾಲ್ಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಅರ್ಜಿಗಳನ್ನು ಪಡೆಯಬಹುದು ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
0 Comments