ಮಹಿಳೆಯರ ಫ್ರೀ ಬಸ್ ಸಂಚಾರಕ್ಕೆ `ಸ್ಮಾರ್ಟ್ ಕಾರ್ಡ್' : ಪಡೆಯವುದು ಹೇಗೆ

ಮಹಿಳೆಯರ ಫ್ರೀ ಬಸ್ ಸಂಚಾರಕ್ಕೆ `ಸ್ಮಾರ್ಟ್ ಕಾರ್ಡ್' : ಪಡೆಯವುದು ಹೇಗೆ

ರಾಜ್ಯ ಸರ್ಕಾರದಿಂದ ಶಕ್ತಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿ, ಆದೇಶ ಹೊರಡಿಸಿದೆ. ಈ ಆದೇಶದಲ್ಲಿ ಕೆಲ ಷರತ್ತುಗಳನ್ನು ಕೂಡ ಮಹಿಳೆಯರು ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ವಿಧಿಸಿದೆ. ಅದರಲ್ಲಿ ಒಂದು ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯುವುದು ಆಗಿದೆ.

ಹೀಗಿವೆ ಶಕ್ತಿ ಯೋಜನೆಯ ಷರತ್ತುಗಳು

ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ ( ಎಲ್ಲಾ ಅಂತರ ರಾಜ್ಯ ಸಾರಿಗೆ ಅನುಸೂಚಿಗಳನ್ನು ಹೊರತುಪಡಿಸಿ ) ಈ ಯೋಜನೆಯು ಅನ್ವಯಿಸತಕ್ಕದ್ದು.

ಐಷಾರಾಮಿ ಬಸ್ ಗಳಾದ ರಾಜಹಂಸ, ನಾನ್ ಎಸಿ ಸ್ಲೀಪರ್ ಹಾಗೂ ವಜ್ರ, ವಾಯು ವಜ್ರ, ಐರಾವತ, ಐರಾವತ್ ಕ್ಲಬ್ ಕ್ಲಾಸ್, ಐರಾವತ ಗೋಲ್ಟ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ (ಎಸಿ ಬಸ್ ) ಇವುಗಳಿಗೆ ಈ ಯೋಜನೆಯು ಅನ್ವಯಿಸುವುದಿಲ್ಲ.

ಶೇ.50ರಷ್ಟು ಆಸನಗಳು ಪುರುಷರಿಗೆ ಮೀಸಲು.

ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು.

ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಣೆಗೆ ಮುನ್ನ ಸರ್ಕಾರದ ಐಡಿ ಕಾರ್ಡ್ ತೋರಿಸಿ ಮಹಿಳೆಯರು ಶೂನ್ಯ ಟಿಕೆಟ್ ಪಡೆದು ಪ್ರಯಾಣಿಸುವುದು.

ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯುವುದು ಹೇಗೆ.?

ರಾಜ್ಯ ಸರ್ಕಾರದಿಂದ ಶಕ್ತಿ ಯೋಜನೆಯ ಅಡಿಯಲ್ಲಿ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯ ಲಾಭವನ್ನು ಪಡೆಯಲು ಮಹಿಳೆಯರು ಶಕ್ತಿ ಸ್ಮಾರ್ಟ್ ಕಾಡ್ ಪಡೆಯಬೇಕಿದೆ. ಇದಕ್ಕಾಗಿ ಮಹಿಳೆಯರು ಸೇವಾಸಿಂಧು ಪೋರ್ಟ್ ನಲ್ಲಿ ಅರ್ಜಿಯನ್ನು ಸರ್ಕಾರದಿಂದ ಕರೆಯಲಾಗುತ್ತದೆ. ಆಗ ಅರ್ಜಿಯನ್ನು ಸಲ್ಲಿಸಿ, ಪಡೆಯಬೇಕಾಗಿದೆ.

ಹಾಗಾದ್ರೇ ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯುವುದು ಹೇಗೆ.? ಅರ್ಜಿ ಸಲ್ಲಿಕೆ ಹೇಗೆ ಎನ್ನುವ ಬಗ್ಗೆ ಮುಂದೆ ಓದಿ.

ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ.ವಿಎಸ್ ಅವರು ನಡವಳಿಗಳನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರು ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಟಾಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಸಾಮಾನ್ಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ಒದಗಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶಲಾಗಿದೆ ಎಂದಿದ್ದಾರೆ.

ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರು ( ವಿದ್ಯಾರ್ಥಿನಿಯರು ಸೇರಿದಂತೆ ) ಮತ್ತು ಲಿಂಗತ್ವ ಅಲ್ಪ ಸಂಖ್ಯಾತರು ನಗರ, ಸಾಮಾನ್ಯ ಮತ್ತು ವೇದೂತ ಸಾರಿಗೆಗಳಲ್ಲಿ ( ಎಸಿ ಬಸ್ ಮತ್ತು ಐಷಾರಾಮಿ) ಬಸ್ ಗಳಲ್ಲಿ ಹೊರತುಪಡಿಸಿ ಉಚಿವಾಗಿ ಪ್ರಯಾಣಿಸಲು ಅವಕಾಶ ನೀಡಿರುತ್ತದೆ ಎಂದು ಹೇಳಿದ್ದಾರೆ.

ಈ ಪ್ರಸ್ತಾವನೆ ಹಿನ್ನಲೆಯಲ್ಲಿ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಕರ್ನಾಟಕ ರಾಜ್ಯಾಧ್ಯಂತ ನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರು ( ವಿದ್ಯಾರ್ಥಿನಿಯರು ಸೇರಿದಂತೆ ) ಮತ್ತು ಲಿಂಗತ್ವ ಅಲ್ಪ ಸಂಖ್ಯಾತರು ಉಚಿತವಾಗಿ ಪ್ರಯಾಣಿಸಲು ಈ ಕೆಳಕಂಡ ಷರತ್ತುಗಳೊಂದಿಗೆ ದಿನಾಂಕ 11-06-2023ರಿಂದ ಶಕ್ತಿ ಯೋಜನೆಯನ್ನು ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದ್ದಾರೆ.

  • ಶಕ್ತಿ ಯೋಜನೆಯ ಷರತ್ತುಗಳು

ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ ( ಎಲ್ಲಾ ಅಂತರ ರಾಜ್ಯ ಸಾರಿಗೆ ಅನುಸೂಚಿಗಳನ್ನು ಹೊರತುಪಡಿಸಿ ) ಈ ಯೋಜನೆಯು ಅನ್ವಯಿಸತಕ್ಕದ್ದು.

ಐಷಾರಾಮಿ ಬಸ್ ಗಳಾದ ರಾಜಹಂಸ, ನಾನ್ ಎಸಿ ಸ್ಲೀಪರ್ ಹಾಗೂ ವಜ್ರ, ವಾಯು ವಜ್ರ, ಐರಾವತ, ಐರಾವತ್ ಕ್ಲಬ್ ಕ್ಲಾಸ್, ಐರಾವತ ಗೋಲ್ಟ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ (ಎಸಿ ಬಸ್ ) ಇವುಗಳಿಗೆ ಈ ಯೋಜನೆಯು ಅನ್ವಯಿಸುವುದಿಲ್ಲ.

ಶೇ.50ರಷ್ಟು ಆಸನಗಳು ಪುರುಷರಿಗೆ ಮೀಸಲು.

ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು.

ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಣೆಗೆ ಮುನ್ನ ಸರ್ಕಾರದ ಐಡಿ ಕಾರ್ಡ್ ತೋರಿಸಿ ಮಹಿಳೆಯರು ಶೂನ್ಯ ಟಿಕೆಟ್ ಪಡೆದು ಪ್ರಯಾಣಿಸುವುದು.

Post a Comment

0 Comments