ಶಾಲಾ ಮಕ್ಕಳಿಗೆ ಬಸ್‌ ಪಾಸ್‌ ಅವಧಿ ವಿಸ್ತರಣೆ; ಎಷ್ಟು ದಿನಕ್ಕೆ ಅವಕಾಶ, ಏನಿದೆ ಕಂಡೀಷನ್ KSRTC Bus Pass

ಶಾಲಾ ಮಕ್ಕಳಿಗೆ ಬಸ್‌ ಪಾಸ್‌ ಅವಧಿ ವಿಸ್ತರಣೆ; ಎಷ್ಟು ದಿನಕ್ಕೆ ಅವಕಾಶ, ಏನಿದೆ ಕಂಡೀಷನ್ KSRTC Bus Pass

 






ಬೆಂಗಳೂರು: ರಾಜ್ಯಾದ್ಯಂತ 2023-24ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಬುಧವಾರದಿಂದ (ಮೇ 31) ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಶುರುವಾಗಿವೆ.







ಈ ಹಿನ್ನೆಲೆಯಲ್ಲಿ ಬಸ್‌ಗಳಲ್ಲಿ ಬರುವ ಮಕ್ಕಳಿಗೆ ಪಾಸ್‌ (KSRTC Bus Pass) ವ್ಯವಸ್ಥೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತಾತ್ಕಾಲಿಕ ರಿಲೀಫ್‌ ನೀಡಿದ್ದು, 15 ದಿನಗಳ ವರೆಗೆ ಅವಧಿಯನ್ನು ವಿಸ್ತರಣೆ ಮಾಡಿದೆ. ಹೀಗಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ನಿಗದಿತ ಸಮಯದೊಳಗೆ ಬಸ್‌ ಪಾಸ್‌ ಅನ್ನು ಮಾಡಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ.


ಈ ಸಂಬಂಧ ವಿದ್ಯಾರ್ಥಿಗಳಿಗೆ ದಿನಾಂಕ 15.06.2023 ರವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಶೈಕ್ಷಣಿಕ ತರಗತಿಗಳಿಗೆ ಹಾಜರಾಗಲು ಯಾವುದೇ ಅನಾನುಕೂಲವಾಗದಂತೆ ಕ್ರಮವಹಿಸಲಾಗಿದೆ. 2022-23ನೇ ಸಾಲಿನ ವಿದ್ಯಾರ್ಥಿಗಳು ಹಳೇ ಬಸ್‌ ಪಾಸ್‌ ಇಲ್ಲವೇ ಪ್ರಸಕ್ತ ವರ್ಷದಲ್ಲಿ ಶಾಲಾ / ಕಾಲೇಜುಗಳಿಗೆ ದಾಖಲಾಗಿರುವ ಶುಲ್ಕ ಪಾವತಿ ರಸೀದಿಯನ್ನು ತೋರಿಸಿಯೂ ಪ್ರಯಾಣ ಮಾಡಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ದೇಶಕರು ಸುತ್ತೋಲೆಯನ್ನು ಹೊರಡಿಸಿದ್ದಾರೆ.


2023-24ನೇ ಸಾಲಿನ ವಿದ್ಯಾರ್ಥಿ ಪಾಸ್‌ಗಳನ್ನು ಇಡಿಸಿಎಸ್ ಇಲಾಖೆಯ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಂಪೂರ್ಣ ಯಾಂತ್ರೀಕೃತವಾಗಿ ವಿತರಣೆ ಮಾಡಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಈ ಕ್ರಮ ವಹಿಸಲಾಗಿದೆ. ಇಡಿಸಿಎಸ್ ಇಲಾಖೆಯು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಹಾಗೂ ಪಾಸ್‌ ಪಡೆಯಲು ಕಾಲಾವಕಾಶವನ್ನು ನೀಡಲಾಗಿದೆ.



ಈ ಹಿಂದೆ ಕೋರ್ಸ್ ಗಳಲ್ಲಿ ಅನ್ವಯಿಸುತ್ತಿರುವ ಬಿಎ ಬಿಕಾಂ ಬಿ ಎಸ್ ಸಿ ಬಿಪಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಬಸ್ ಪಾಸ್ ರಿಯಾಯಿತಿ ದರದಲ್ಲಿ ಆನ್ಲೈನ್ ಅಪ್ಲಿಕೇಶನ್ ಮಾಡಿ ಪ್ರೆಸ್ಸು ಪಾಲರಿಗೆ ಸಹಿ ಮಾಡಿಸಿ ಹಿಂದಿನ ಬಸ್ ಪಾಸ್ ತಿಂಗಳದ ಅವಧಿವರೆಗೆ ಕೊಡುವಂತೆ ರಾಜ್ಯ ಸರ್ಕಾರದ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದರೂ ಹೆಚ್ಚಿನ ಮಾಹಿತಿಗಾಗಿ .





  •  ಲಿಂಕ್ ಮೇಲೆ ಕ್ಲಿಕ್ ಮಾಡಿ

Post a Comment

0 Comments