ಕರ್ನಾಟಕ ರಾಜ್ಯದ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಮತ್ತೊಂದು ಸಿಹಿ ಸುದ್ಧಿ ಇದೆ. ಗೃಹಲಕ್ಷ್ಮಿ ಯೋಜನೆ ಆದ ಬಳಿಕ ಈಗ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಬೀದರ್, ತುಮಕೂರು ಜಿಲ್ಲೆಗಳು ಸೇರಿದಂತೆ ಹಲವು ವಿಭಾಗಗಳಲ್ಲಿ ನೇಮಕಾತಿ ನಡೆಯುತ್ತಿದ್ದು ಈ ಅಂಕಣದಲ್ಲಿ ತುಮಕೂರು ಜಿಲ್ಲೆಯಲ್ಲಿ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕರ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ತಿಳಿಸುತ್ತಿದ್ದೇವೆ. ಪೂರ್ತಿ ಮಾಹಿತಿಗಾಗಿ ಅಂಕಣವನ್ನು ಕೊನೆವರೆಗೂ ಓದಿ.
ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳಿಗೆ ಸಿಹಿ ಸುದ್ದಿ ಮೊದಲ ಕಂತಿನ ಹಣ 3000 ಜಮೆ
ನೇಮಕಾತಿ ಸಂಸ್ಥೆ:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD)
ಒಟ್ಟು ಹುದ್ದೆಗಳು:- 384 ಹುದ್ದೆಗಳು
ಹುದ್ದೆಗಳ ವಿವರ:-
* ಅಂಗನವಾಡಿ ಕಾರ್ಯಕರ್ತೆಯರು – 106* ಅಂಗನವಾಡಿ ಸಹಾಯಕಿಯರು – 278
ಉದ್ಯೋಗ ಸ್ಥಳ:- ತುಮಕೂರು ಜಿಲ್ಲೆ
* ಚಿಕ್ಕನಾಯಕನಹಳ್ಳಿ* ಶಿರಾ
* ಪಾವಗಡ
* ಮಧುಗಿರಿ
* ಕೊರಟಗೆರೆ
* ಗುಬ್ಬಿ
* ತಿಪಟೂರು
* ತುರುವೇಕೆರೆ
* ಕುಣಿಗಲ್
* ತುಮಕೂರು ಗ್ರಾಮೀಣ
* ತುಮಕೂರು ಪಟ್ಟಣ ಪ್ರದೇಶದ ಅಂಗನವಾಡಿ ಕೇಂದ್ರಗಳಲ್ಲಿ.
ಶೈಕ್ಷಣಿಕ ವಿದ್ಯಾರ್ಹತೆ:-
1. ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಕನಿಷ್ಠ ದ್ವಿತೀಯ PUC ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು ಮತ್ತು SSLC ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಾಸ ಮಾಡಿರಬೇಕು.
* ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಕಾರ್ಮಿಕ ಇಲಾಖೆಯಿಂದ ಲೇಬರ್ ಕಾರ್ಡ್ ಇದ್ದವರಿಗೆ 2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ.! ಆಸಕ್ತರು ಅರ್ಜಿ ಸಲ್ಲಿಸಿ
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 19 ವರ್ಷಗಳು* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ
ಅರ್ಜಿ ಸಲ್ಲಿಸುವ ವಿಧಾನ:-
* ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು
* ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸುವ ಲಿಂಕ್ ಕ್ಲಿಕ್ ಮಾಡಿ ವಿವರಗಳನ್ನು ತುಂಬಿಸಬೇಕು
* ಅರ್ಜಿ ಸಲ್ಲಿಕೆ ಸಮಯದಲ್ಲಿ ಕೇಳಲಾಗುವ ಪೂರಕ ದಾಖಲೆಗಳ ಸಂಖ್ಯೆ ಅಥವಾ ಅವುಗಳ ಕಾಪಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು
* ಅರ್ಜಿ ಸಲ್ಲಿಕೆ ಯಶಸ್ವಿ ಆದ ಮೇಲೆ ತಪ್ಪದೆ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಿ.
ಆಯ್ಕೆ ವಿಧಾನ:-
* ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳ ಅನುಸಾರವಾಗಿ ಕ್ರೋಢಿಕೃತ ಪಟ್ಟಿಯನ್ನು ತಯಾರಿಸಲಾಗುವುದು.
* ಈ ಪಟ್ಟಿಯಲ್ಲಿ ಅರ್ಹತೆ ಮತ್ತು ಮೆರಿಟ್ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕಗಳು ಇರುವುದಿಲ್ಲ
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 10 ಜನವರಿ, 2024.
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 05 ಫೆಬ್ರವರಿ, 2024.
ಬೇಕಾಗುವ ದಾಖಲೆಗಳು:-
* ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ* ಕೆಳಗಾಗಿರುವ ವಿದ್ಯಾರ್ಹತೆಯ ಅಂಕಪಟ್ಟಿ
* ತಹಶೀಲ್ದಾರರು ಅಥವಾ ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
* ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
* ಮೀಸಲಾತಿ ಕೋರಿ ಅರ್ಜಿ ಸಲ್ಲಿಸಿದ್ದರೆ ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ , ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಅಥವಾ ವಿಧವಾ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ), ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು).
0 Comments